ಗೋಕಾಕ: ಕಟ್ಟಡಕ್ಕೆ ಬಣ್ಣ ಬಳಿಯುತ್ತಿದ್ದ ಕಾರ್ಮಿಕ ಆಯತಪ್ಪಿ ತಲೆಕೆಳಗಾಗಿ ಬಿದ್ದು ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಇಲ್ಲಿನ ಸರ್ಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಶುಕ್ರವಾರ ನಡೆದಿದೆ.
ಗೋಕಾಕ ಫಾಲ್ಸ್ ನಿವಾಸಿ ಆನಂದ ಸತ್ತೆಪ್ಪ ನಾಯಿಕ (34) ಮೃತ.
‘ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ’ ಆರೋಪಿಸಿ ಎಂದು ಗುತ್ತಿಗೆದಾರರ ವಿರುದ್ಧ ಮೃತನ ಪತ್ನಿ ಪೂಜಾ ನೀಡಿದ ದೂರಿನ ಮೇರೆಗೆ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.