Monday, May 19, 2025
Homeಕರಾವಳಿ ಕರ್ನಾಟಕದಕ್ಷಿಣ ಕನ್ನಡಉಳ್ಳಾಲ ಕಾಲೇಜಿನಲ್ಲಿ ಹಿಜಾಬ್ ಗೆ ನಿರಾಕರಣೆ: ವಿದ್ಯಾರ್ಥಿಗಳ ಪ್ರತಿಭಟನೆ ಖಾದರ್ ಭೇಟಿ: ಕಾಲೇಜಿಗೆ ರಜೆ ಘೋಷಣೆ...

ಉಳ್ಳಾಲ ಕಾಲೇಜಿನಲ್ಲಿ ಹಿಜಾಬ್ ಗೆ ನಿರಾಕರಣೆ: ವಿದ್ಯಾರ್ಥಿಗಳ ಪ್ರತಿಭಟನೆ ಖಾದರ್ ಭೇಟಿ: ಕಾಲೇಜಿಗೆ ರಜೆ ಘೋಷಣೆ 

ಉಳ್ಳಾಲ: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಇಲಾಖೆಯ ಆದೇಶದಂತೆ ಹಿಜಾಬ್‌ ಧರಿಸಬೇಡಿ ಎಂದ ಕಾಲೇಜಿನ‌ ಆಡಳಿತ ಮಂಡಳಿ ಸೂಚನೆ ನೀಡಿರುವುದಕ್ಕೆ ವಿದ್ಯಾರ್ಥಿಗಳು ಪ್ರತಿಭಟಿಸಿ, ಕಾಲೇಜು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಶಿಕ್ಷಣ ಇಲಾಖೆಯ ಆದೇಶದಂತೆ ಕಾಲೇಜು ಆಡಳಿತ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಹಿಜಾಬ್ ತೆಗೆದು ಬರುವಂತೆ ಸೂಚನೆ ನೀಡಿದೆ.
ಈ ವೇಳೆ ವಿದ್ಯಾರ್ಥಿಗಳು ಕೋರ್ಟ್ ಆದೇಶ ಬರಲಿ ಮತ್ತೆ ನೋಡೋಣ. ಅಲ್ಲಿಯವರೆಗೆ ಹಿಜಾಬ್ ಧರಿಸುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.
ನಮಗೆ ಟಿ.ಸಿ ಕೊಡಿ. ಇಲ್ಲವೇ ಕೋರ್ಟ್ ಆದೇಶ ಬರುವವರೆಗೆ ರಜೆ ಕೊಡಿ ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿತ್ತು.
ಈ ಸಂದರ್ಭದಲ್ಲಿ ಶಾಸಕ ಯುಟಿ ಖಾದರ್ ಕಾಲೇಜಿಗೆ ಭೇಟಿ ನೀಡಿ, ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿದರು. ವಿದ್ಯಾರ್ಥಿಗಳ ಭವಿಷ್ಯ ಮುಖ್ಯ. ವಿದ್ಯಾಭ್ಯಾಸ ಹಾಳಾಗಬಾರದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದರು.
ಎಲ್ಲವೂ ಸರಿ ಹೋಗುವವರೆಗೆ ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.