Monday, May 19, 2025
Homeಸುದ್ದಿಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭ

ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭ

ಹುಬ್ಬಳ್ಳಿ: ನಗರದಲ್ಲಿ ಆಯೋಜನೆಯಾಗಿರುವ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಮಂಗಳವಾರ ಮಧ್ಯಾಹ್ನ ಆರಂಭವಾಯಿತು.

ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಯಾಗಬೇಕಿದ್ದ ಸಮಾರಂಭ, ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ ಅವರು ಬರುವುದು ವಿಳಂಬವಾದ್ದರಿಂದ ಮಧ್ಯಾಹ್ನ ಉದ್ಘಾಟನೆಗೊಂಡಿತು.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್‌. ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ. ರಾಷ್ಟ್ರೀಯ ಉಪಾಧ್ಯಕ್ಷೆ ಅರುಣಾ,
ಸಚಿವರಾದ ಆರ್. ಅಶೋಕ್. ಎಸ್ ಟಿ ಸೋಮಶೇಖರ್, ಡಾ. ಸುಧಾಕರ, ಶಂಕರಪಾಟೀಲ ಮುನೇನಕೊಪ್ಪ, ಕೆ ಎಸ್ ಈಶ್ವರಪ್ಪ. ಎಂಟಿಬಿ ನಾಗರಾಜ, ಗೋವಿಂದ ಕಾರಜೋಳ, ಮಾಧುಸ್ವಾಮಿ. ಕೋಟಾ ಶ್ರೀನಿವಾಸ ಪೂಜಾರಿ,
ಸುನೀಲಕುಮಾರ್, ಸಂಸದ ಸದಾನಂದಗೌಡ, ಸಂಘಟನಾ ಕಾರ್ಯದರ್ಶಿ ಅರುಣಕುಮಾರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.