Saturday, December 14, 2024
Homeಮೈಸೂರು ವಿಭಾಗಮೈಸೂರುಕೋವಿಡ್ ನೆಪದಲ್ಲಿ ಮೇಕೆದಾಟು ಪಾದಯಾತ್ರೆ ತಡೆಯಲು ಹುನ್ನಾರ, ಜೈಲಿಗೆ ಕಳುಹಿಸಿದರೂ ಪರವಾಗಿಲ್ಲ ಪಾದಯಾತ್ರೆ ಮುಂದುವರಿಯಲಿದೆ: ಡಿಕೆಶಿ

ಕೋವಿಡ್ ನೆಪದಲ್ಲಿ ಮೇಕೆದಾಟು ಪಾದಯಾತ್ರೆ ತಡೆಯಲು ಹುನ್ನಾರ, ಜೈಲಿಗೆ ಕಳುಹಿಸಿದರೂ ಪರವಾಗಿಲ್ಲ ಪಾದಯಾತ್ರೆ ಮುಂದುವರಿಯಲಿದೆ: ಡಿಕೆಶಿ


ಮೈಸೂರು: ‘ಕೋವಿಡ್ ವಿಚಾರ ಮುಂದಿಟ್ಟುಕೊಂಡು ಮೇಕೆದಾಟು ಪಾದಯಾತ್ರೆ ತಡೆಯಲು ಬಿಜೆಪಿ ಸರ್ಕಾರ ಹುನ್ನಾರ ನಡೆಸುತ್ತಿದೆ. ಜೈಲಿಗೆ ಕಳುಹಿಸಿದರೂ ಪರವಾಗಿಲ್ಲ ಪಾದಯಾತ್ರೆ ಮುಂದುವರಿಯಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದರು.

‘ಲಾಕ್ ಡೌನ್ ಸೃಷ್ಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಲಾಕ್ ಡೌನ್ ಮಾಡಲಿ, ಬೇರೆ ಏನೇ ಮಾಡಲಿ ಪಾದಯಾತ್ರೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಕೋವಿಡ್‌ ಇದ್ದರೂ ಮುಖ್ಯಮಂತ್ರಿ, ಮಂತ್ರಿಗಳು ಮದುವೆಯಲ್ಲಿ ಪಾಲ್ಗೊಂಡು ಮಾರ್ಗಸೂಚಿ ಉಲ್ಲಂಘಿಸಿಲ್ಲವೇ? ಅವರ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ’ ಎಂದು ಸೋಮವಾರ ಇಲ್ಲಿ ಸುದ್ದಿಗೊಷ್ಠಿಯಲ್ಲಿ ಪ್ರಶ್ನಿಸಿದರು.

‘ಮುಂಜಾಗ್ರತೆಯ ಕ್ರಮ ತೆಗೆದುಕೊಂಡು ಪಾದಯಾತ್ರೆ ನಡೆಸುತ್ತೇವೆ. ಒಂದು ಲಕ್ಷ ಮಾಸ್ಕ್ ತರಿಸಲಿದ್ದೇವೆ.10 ವೈದ್ಯಕೀಯ ತಂಡ ಇರಲಿದ್ದು, 100 ವೈದ್ಯರು ಪಾಲ್ಗೊಳ್ಳುತ್ತಾರೆ’ ಎಂದು ತಿಳಿಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ‘ಕೋವಿಡ್ ನೆಪ ಮುಂದಿಟ್ಟುಕೊಂಡು ಪಾದಯಾತ್ರೆ ತಡೆಯಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಏನೇ ಪ್ರಯತ್ನ ನಡೆಸಿದರೂ ನಮ್ಮ ಪಾದಯಾತ್ರೆ ತಡೆಯಲು ಆಗಲ್ಲ’ ಎಂದರು.