Saturday, December 14, 2024
Homeಮಧ್ಯ ಕರ್ನಾಟಕದಾವಣಗೆರೆಜಗಳೂರಿನಲ್ಲಿ ಅಪಘಾತ: 7 ಮಂದಿ ಸಾವು

ಜಗಳೂರಿನಲ್ಲಿ ಅಪಘಾತ: 7 ಮಂದಿ ಸಾವು

ದಾವಣಗೆರೆ; ಜಿಲ್ಲೆಯ ಜಗಳೂರು ತಾಲ್ಲೂಕು ಬಳಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಕಾನನಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಘಟನೆ ನಡೆದಿದ್ದು, ರಸ್ತೆ ವಿಭಜಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಆರು ಜನ ಸ್ಥಳದಲ್ಲಿಯೇ ಮೃತಪಟ್ಟರೆ ಒಬ್ಬರು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ.
ಮೃತಪಟ್ಟವರು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನವರು ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.