Monday, May 19, 2025
Homeಸುದ್ದಿರಾಜ್ಯಜೀವಮಾನ ಸಾಧನೆ ಪ್ರಶಸ್ತಿಗೆ ವಿಜ್ಞಾನ ಲೇಖಕ ಡಾ.ಟಿ.ಆರ್‌. ಅನಂತರಾಮು ಆಯ್ಕೆ

ಜೀವಮಾನ ಸಾಧನೆ ಪ್ರಶಸ್ತಿಗೆ ವಿಜ್ಞಾನ ಲೇಖಕ ಡಾ.ಟಿ.ಆರ್‌. ಅನಂತರಾಮು ಆಯ್ಕೆ

ಬೆಂಗಳೂರು: ವಿಜ್ಞಾನ ಲೇಖಕ ಡಾ.ಟಿ.ಆರ್‌.ಅನಂತರಾಮು ಅವರನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ (ಕೆಎಸ್‌ಟಿಎ) ಜೀವಮಾನ ಸಾಧನೆಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿಜ್ಞಾನ, ತಂತ್ರಜ್ಞಾನ, ಕೃಷಿ, ಎಂಜಿನಿಯರಿಂಗ್‌, ವೈದ್ಯಕೀಯ ವಿಷಯಗಳನ್ನು ಕನ್ನಡದಲ್ಲಿ ಪ್ರಚುರಪಡಿಸಿ ಜನಪ್ರಿಯಗೊಳಿಸುವಲ್ಲಿ ಅನಂತರಾಮು ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ 2021ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಚಿನ್ನದ ಪದಕ, ₹ 50 ಸಾವಿರ ನಗದು, ಗೌರವ ಫೆಲೋಶಿಪ್ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಡಿಸೆಂಬರ್‌ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕೆಎಸ್‌ಟಿಎ ಅಧ್ಯಕ್ಷ ಪ್ರೊ. ಎಸ್‌. ಅಯ್ಯಪ್ಪನ್‌ ತಿಳಿಸಿದ್ದಾರೆ.