Saturday, December 14, 2024
Homeರಾಜ್ಯಉತ್ತರ ಕರ್ನಾಟಕಭಟ್ಕಳ: ಎನ್.ಐ.ಐ ಅಧಿಕಾರಿಗಳಿಂದ ಮೂವರ ವಿಚಾರಣೆ

ಭಟ್ಕಳ: ಎನ್.ಐ.ಐ ಅಧಿಕಾರಿಗಳಿಂದ ಮೂವರ ವಿಚಾರಣೆ

ಭಟ್ಕಳ: ಪಟ್ಟಣದ ಎರಡು ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳದ (ಎನ್.ಐ.ಎ) ಅಧಿಕಾರಿಗಳು ಶನಿವಾರ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಸಾಗರ ರಸ್ತೆ ಮತ್ತು ಉಮರ್ ಸ್ಟ್ರೀಟ್‌ನ ಮನೆಗಳಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಅಮೀನ್, ಜುಫ್ರಾ ದಾಮುದಿ ಹಾಗೂ ಜವ್ವಾದ್ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರೆಲ್ಲರೂ ಸೋದರ ಸಂಬಂಧಿಗಳಾಗಿದ್ದಾರೆ.

ದೆಹಲಿಯಿಂದ ಬಂದಿರುವ ಎನ್.ಐ.ಎ ಅಧಿಕಾರಿಗಳಿಗೆ, ಉತ್ತರ ಕನ್ನಡ ಜಿಲ್ಲಾ ಪೊಲೀಸರು ಎನ್.ಐ.ಎ. ಅಧಿಕಾರಿಗಳಿಗೆ ಅಗತ್ಯ ನೆರವು ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಭದ್ರತೆ ಉಸ್ತುವಾರಿ ನೋಡಿಕೊಂಡಿದ್ದಾರೆ.