ಯಾದಗಿರಿ: ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 17ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಯುಕೆಪಿ ಕ್ಯಾಂಪ್ ನ ಸಾಹೇಬ ಗೌಡ ಹಗರಟಗಿ ಕುಟುಂಬದಲ್ಲಿ ಸೀಮಂತ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು. ಅಡುಗೆ ಮಾಡುವ ವೇಳೆ ಎರಡು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಇದರಿಂದ ಶಾಮಿಯಾನ ಸೇರಿದಂತೆ ಅಡುಗೆ ಸಾಮಾನುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳವರು ಭೇಟಿ ನೀಡಿದ್ದಾರೆ.
ಸಣ್ಣಪುಟ್ಟ ಗಾಯಗೊಂಡವರನ್ನು ದೋರನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲು ಮಾಡಲಾಗಿದೆ. ಗಂಭೀರ ಗಾಯಗೊಂಡವರನ್ನು ಶಹಾಪುರ ತಾಲ್ಲೂಕು ಆಸ್ಪತ್ರೆ, ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಎಂಟು ಜನರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.