ಯಾದಗಿರಿ: ಇತ್ತೀಚೆಗೆ ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟ ಸಂಭವಿಸಿದ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಕ್ಯಾಂಪ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಸೋಮವಾರ ಭೇಟಿ ನೀಡಿ, ಸಂತ್ರಸ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಭಾನುವಾರ ಗಾಯಾಳುಗಳನ್ನು ಭೇಟಿ ಮಾಡಿದ್ದೇನೆ. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದೇನೆ ಎಂದರು.
ಈ ವೇಳೆ ರಾಯಚೂರು ಸಂಸದ ರಾಜಾ ಅಮರೇಶ ನಾಯಕ, ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ.ಆರ್, ಜಿ.ಪಂ. ಸಿಇಒ ಅಮರೇಶ್, ಶಹಾಪುರ ತಹಶೀಲ್ದಾರ್ ಮಧುರಾಜ್ ಕೂಡ್ಲಿಗಿ ಇದ್ದರು.
ಯುಕೆಪಿ ಕ್ಯಾಂಪಿನಲ್ಲಿ ಸಿಲಿಂಡರ್ ಅನಿಲ ಸೋರಿಕೆಯಿಂದ ಆದ ಅವಘಡದಿಂದ ಈಗಾಗಲೇ ನಾಲ್ಕು ಜನ ಮೃತಪಟ್ಟಿದ್ದಾರೆ. ಉಳಿದ 19 ಜನ ಕಲಬುರಗಿಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿಲಿಂಡರ್ ಅನಿಲ ಸೋರಿಕೆಯ ಜಾಗಕ್ಕೆ ಭಾನುವಾರ ಶಹಾಪುರ ಠಾಣೆಯ ಪೊಲೀಸರು ಭೇಟಿ ಮಹಜರು ಮಡಿಕೊಂಡಿದ್ದರು.