Sunday, January 5, 2025
Homeಕರಾವಳಿ ಕರ್ನಾಟಕದಕ್ಷಿಣ ಕನ್ನಡಸ್ಮಾರ್ಟ್ ಸಿಟಿ ಯೋಜನೆಯ ಕಾರ್ಯ‌ನಿರ್ವಾಹಕ ಎಂಜಿನಿಯರ್ ಲಿಂಗೇಗೌಡ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ

ಸ್ಮಾರ್ಟ್ ಸಿಟಿ ಯೋಜನೆಯ ಕಾರ್ಯ‌ನಿರ್ವಾಹಕ ಎಂಜಿನಿಯರ್ ಲಿಂಗೇಗೌಡ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯ ಕಾರ್ಯ‌ನಿರ್ವಾಹಕ ಎಂಜಿನಿಯರ್ ಲಿಂಗೇಗೌಡ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಲ್ಲಿನ ಅಶೋಕ ನಗರದಲ್ಲಿರುವ ಅವರ ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ.

ಲಿಂಗೇಗೌಡರು ಮೂರು ದಶಕಗಳಿಂದ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಅವಧಿಯಲ್ಲಿ ಮಂಗಳೂರು ಮಹಾನಗರಪಾಲಿಕೆ ನೀರು ಸರಬರಾಜು ವಿಭಾಗದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಅವರನ್ನು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಗೆ ವರ್ಗಾಯಿಸಲಾಗಿತ್ತು.

15 ವರ್ಷಗಳ ಹಿಂದೆ ಅವರ ಮೇಲೆ ಲೋಕಾಯುಕ್ತ ತನಿಖೆ ನಡೆದಿತ್ತು.