ಚಿತ್ರದುರ್ಗ : ಕಾರು ಹಾಗೂ ಲಾರಿಗಳ ಮಧ್ಯೆ ಭೀಕರ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದು, ಹತ್ತಕ್ಕೂ ಹೆಚ್ಚು ಜನ ಗಾಯಗೊಂಡರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಕಾಫಿ ಹೌಸ್ ಯ ಆಲೂರು ಕ್ರಾಸ್ ಬಳಿ ಬೆಳಗಿನ ಜಾವ ನಡೆದಿದೆ.
ಹನುಮಪ್ಪ ಕಳಕಪ್ಪ ಹುನಗುಂದಿ (30), ಗುರಪ್ಪಾ ಹುಗರ್ (26), ರಮೇಶ್ (28), ಪ್ರಾಶಂತ್ ಹಟ್ಟಿ (36) ಮೃತರು ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಗದಗ ಜಿಲ್ಲೆಯ ಹುಯಿಗೊಳ ಗ್ರಾಮದವರು ಎಂದು ಗುರುತಿಸಲಾಗಿದೆ. ಇನ್ನೂ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಕಡೆಯಿಂದ ಬೆಂಗಳೂರು ಕಡೆ ಹೋಗುವಾಗ ಈರುಳ್ಳಿ ತುಂಬಿಕೊಂಡು ಬೆಂಗಳೂರು ಕಡೆ ಹೋಗುವಾಗ ಇಚರ್ ಲಾರಿ ಟೈರ್ ಬರೆಸ್ಟ್ ಆಗಿ ಪಲ್ಟಿ ಹೊಡೆದಿದ್ದಾಗ ಹಿಂದೆ ಬಂದ ಮತ್ತೊಂದು ಕಾರು, ಲಾರಿಗಳು ಡಿಕ್ಕಿಯಾಗಿ ಮತ್ತೊಂದು ಈ ಅವಘಡ ಸಂಭವಿಸಿದೆ. ಅಪಘಾತದ ರಭಸಕ್ಕೆ ಈರುಳ್ಳಿ ಚೀಲಗಳು ಚೆಲ್ಲಾಪಿಲ್ಲಿಯಾಗಿದ್ದು, ಇನ್ನೂ ಎರಡು ಲಾರಿಗಳು ಪಲ್ಟಿಯಾಗಿವೆ.
ಸ್ಥಳಕ್ಕೆ ಎಸ್ಪಿ ಜಿ ರಾಧಿಕಾ, ಡಿವೈಎಸ್ಪಿ ರೋಷರ್ ಜಮೀರ್, ಸಿಪಿಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟ್ರಾಫಿಕ್ ಜಾಮ್ : ಅಪಘಾತ ಸಂಭವಿಸಿದ್ದು ಕಿಲೋಮೀಟರ್ ದೂರದವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಪೋಲಿಸರು ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.