ತಿಪಟೂರು: ಅಂಗನವಾಡಿ ಸಹಾಯಕಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಭಾನುವಾರ ನಡೆದಿದೆ.
ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಗ್ರಾಮದ ಅಂಗನವಾಡಿ ಸಹಾಯಕಿ ಭಾರತಿ (30) ಕೊಲೆಯಾದವರು.
ಅದೇ ಗ್ರಾಮದ ಮೃತ ಮಹಿಳೆಯ ಗಂಡನ ಅಕ್ಕನ ಮಗ ದಿವಾಕರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಅಂಗನವಾಡಿ ಕಟ್ಟಡ ಹಿಂಭಾಗದ ಮರದ ಬಳಿಯಲ್ಲಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.