ಬೆಳಗಾವಿ: ಅಗತ್ಯ ವಸ್ತುಗಳು ಹಾಗೂ ತೈಲ ದರ ಏರಿಕೆ ಖಂಡಿಸಿ ಕೆಪಿಸಿಸಿ ಮಹಿಳಾ ಘಟಕದವರು ತಾಲ್ಲೂಕಿನ ಅಲಾರವಾಡ ಕ್ರಾಸ್ ಬಳಿ ಬುಧವಾರ ವಿನೂತನವಾಗಿ ಪ್ರತಿಭಟಿಸಿದರು.
ರಸ್ತೆಯಲ್ಲೇ ತರಕಾರಿ, ದಿನಸಿ ಸಾಮಗ್ರಿಗಳು ಹಾಗೂ ಅಡುಗೆ ಅನಿಲ ಸಿಲಿಂಡರ್ ಇಟ್ಟು ಪ್ರತಿಭಟಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲ ನೀಡಿದರು.
ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಈ ಕಾರ್ಯಕರ್ತೆಯರು ಉದ್ದೇಶಿಸಿದ್ದಾರೆ.