ದುಬೈ: ಟಿ–20 ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಬಾರಿಯ ಬಹು ನಿರೀಕ್ಷಿತ ತಂಡವಾಗಿದ್ದ ನ್ಯೂಜಿಲೆಂಡ್ ರನ್ನರ್ ಅಪ್‌ಗೆ ತೃಪ್ತಿ ಪಟ್ಟುಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅಬ್ಬರ ಬ್ಯಾಟಿಂಗ್ (85 ರನ್, 3 ಸಿಕ್ಸ್, 10 ಬೌಂಡರಿ) ಬಲದಿಂದಾಗಿ 4 ವಿಕೆಟ್ ಕಳೆದುಕೊಂಡು 172 ರನ್ ಗಳಿಸಿತ್ತು. ಅದನ್ನು ಲೀಲಾಜಾಲವಾಗಿ ಬೆನ್ನತ್ತಿದ ಆಸ್ಟೇಲಿಯಾ ಇನ್ನೂ 7 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಿತು. ಆರಂಭಿಕ ಆಟಗಾರ ಡೇವಿಡ್ ವಾರ್ನರ್ (53), ವನ್ ಡೌನ್ ಆಟಗಾರ ಮಿಚೆಲ್ ಮಾರ್ಷ್ (ಅಜೇಯ 77) ಅರ್ಧ ಶತಕ ಬಾರಿಸಿ ಮಿಂಚಿದರು.