Saturday, December 14, 2024
Homeರಾಜ್ಯಬೆಂಗಳೂರು ವಿಭಾಗಆಸ್ತಿ ನೋಂದಣಿ: ಮಾರ್ಚ್‌ 31ರವರೆಗೆ ಮಾರ್ಗಸೂಚಿ ದರದಲ್ಲಿ ಶೇ 10ರಷ್ಟು ರಿಯಾಯಿತಿ

ಆಸ್ತಿ ನೋಂದಣಿ: ಮಾರ್ಚ್‌ 31ರವರೆಗೆ ಮಾರ್ಗಸೂಚಿ ದರದಲ್ಲಿ ಶೇ 10ರಷ್ಟು ರಿಯಾಯಿತಿ

ಬೆಂಗಳೂರು: ಎಲ್ಲ ವಿಧದ ಸ್ಥಿರಾಸ್ತಿಗಳ (ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್‌, ಫ್ಲಾಟ್‌) ಮಾರಾಟ ಮತ್ತು ಖರೀದಿ ಮಾಡುವವರಿಗೆ ಜ. 1ರಿಂದ ಮಾರ್ಚ್‌ 31ರವರೆಗೆ ಮಾರ್ಗಸೂಚಿ ದರದಲ್ಲಿ ಶೇ 10ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ವಿಷಯ ತಿಳಿಸಿದ ಕಂದಾಯ ಸಚಿವ ಆರ್‌. ಅಶೋಕ, ‘ಕೋವಿಡ್‌ ಕಾರಣದಿಂದ ಎರಡು ವರ್ಷಗಳಿಂದ ಸಂಕಷ್ಟದಲ್ಲಿರುವವರಿಗೆ ಅನುಕೂಲ ಮಾಡಿಕೊಡಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ‘ ಎಂದರು.

‘ಆಯಾ ಪ್ರದೇಶದ ಮಾರ್ಗಸೂಚಿ ದರದ ಪ್ರಕಾರ ಈ ರಿಯಾಯಿತಿ ಅನ್ವಯ ಆಗಲಿದೆ. ಎಲ್ಲ ರೀತಿಯ ಆಸ್ತಿಗಳ ನೋಂದಣಿಗೆ ಈ ರಿಯಾಯಿತಿ ಅನ್ವಯ ಆಗಲಿದೆ’ ಎಂದರು.