ಉಡುಪಿ: ಮೃತ ಸಂತೋಷ್ ಪಾಟೀಲ್ ಕುಟುಂಬದ ಸದಸ್ಯರು ನೀಡಿದ ದೂರಿನ ಪ್ರಕಾರವೇ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಇಬ್ಬರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ದೇವ ಜ್ಯೋತಿ ರೇ ತಿಳಿಸಿದರು.
ಪ್ರಕರಣ ಸಂಬಂಧ ಪಂಚನಾಮೆ ಪ್ರಕ್ರಿಯೆ ಆರಂಭವಾಗಿದ್ದು, ಸಂಬಂಧಿಕರ ಮುಂಭಾಗ ಪರಿಶೀಲನೆ ನಡೆಯುತ್ತಿದೆ.
ಸ್ಥಳದಲ್ಲಿ ದೊರೆತ
ಡಿಜಿಟಲ್ ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೆಎಂಸಿ ಆಸ್ಪತ್ರೆಯ ಹಾಗೂ ಮಂಗಳೂರಿನ ಫೊರೆನ್ಸಿಕ್ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ.
ಮೊದಲೇ ಅಸಹಜ ಸಾವು ಪ್ರಕರಣ
ದಾಖಲು ಮಾಡಿಕೊಳ್ಳಲಾಗಿತ್ತು. ಇದೀಗ ಎಫ್‌ಐಆರ್ ಪ್ರಕಾರ ಆತ್ಮಹತ್ಯೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಸೂಕ್ತ ರೀತಿಯಲ್ಲಿ ತನಿಖೆ ನಡೆಯುತ್ತಿದೆ ಎಂದು ಐಜಿಪಿ ಮಾಹಿತಿ ನೀಡಿದರು.