Saturday, December 14, 2024
Homeಕರಾವಳಿ ಕರ್ನಾಟಕದಕ್ಷಿಣ ಕನ್ನಡಕೊರಗಜ್ಜನ‌ ಕಟ್ಟೆ ಹುಂಡಿಯಲ್ಲಿ‌ ಕಾಂಡೋಮ್ ವಿಎಚ್ ಪಿ‌ ಕಾರ್ಯಕರ್ತರಿಂದ ಆಕ್ರೋಶ

ಕೊರಗಜ್ಜನ‌ ಕಟ್ಟೆ ಹುಂಡಿಯಲ್ಲಿ‌ ಕಾಂಡೋಮ್ ವಿಎಚ್ ಪಿ‌ ಕಾರ್ಯಕರ್ತರಿಂದ ಆಕ್ರೋಶ

ಮಂಗಳೂರು: ನಗರದ ಮಾರ್ನಮಿಕಟ್ಟೆ ಬಳಿಯ ಕೊರಗಜ್ಜನ ಕಟ್ಟೆ ಹುಂಡಿಗೆ ಉಪಯೋಗಿಸಿದ ಕಾಂಡೋಮ್ ಹಾಕಲಾಗಿದ್ದು, ಆರೋಪಿಗಳನ್ನು ಬಂಧಿಸುವಂತೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಒತ್ತಾಯಿಸಿದರು.
ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಯನ್ನು ಅಪವಿತ್ರಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಲು ಶಾಸಕ ವೇದವ್ಯಾಸ ಕಾಮತ್ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುವ ಯಾರೇ ಆದರೂ ಕಠಿಣ ಕ್ರಮ ಜರುಗಿಸಲಾಗುತ್ತದೆ. ಶಾಂತಿಯುತವಾಗಿರುವ ಕರಾವಳಿಯನ್ನು ಇಂತಹ ಕೃತ್ಯಗಳ ಮೂಲಕ ಕೋಮುಗಲಭೆಗೆ ಪ್ರಚೋದಿಸುವ ಶಕ್ತಿಗಳನ್ನು ಹೆಡೆಮುರಿ ಕಟ್ಟಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಪ್ರಶಾಂತವಾಗಿರುವ ಕರಾವಳಿಯಲ್ಲಿ ಕೋಮುಗಲಭೆ ಎಬ್ಬಿಸಲು ಪ್ರಯತ್ನಿಸಿದರೆ ಅದನ್ನು ಕಂಡು ಸುಮ್ಮನೆ ಇರಲಾಗದು. 4 ವರ್ಷಗಳಲ್ಲಿ ಕೋಮುಗಲಭೆಗಳು ನಡೆದಿಲ್ಲ. ಮುಂದೆಯೂ ಅದಕ್ಕೆ ಆಸ್ಪದ ನೀಡುವುದಿಲ್ಲ ಎಂದು ಹೇಳಿದ್ದಾರೆ.