ಬೆಳಗಾವಿ: ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿದ್ದಾರೆ.
ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯವರು ಹಮ್ಮಿಕೊಂಡಿದ್ದ ಮಹಾಮೇಳಾವ ಸಂದರ್ಭದಲ್ಲಿ ಆ ಸಂಘಟನೆಯ ಅಧ್ಯಕ್ಷ ದೀಪಕ ದಳವಿ ಅವರಿಗೆ ಕನ್ನಡಪರ ಹೋರಾಟಗಾರ ಮಸಿ ಎರಚಿದ್ದನ್ನು ಖಂಡಿಸಿ, ಪ್ರತಿಭಟನೆ ನಡೆಸಿದ ಅವರು ಕನ್ನಡ ಬಾವುಟವನ್ನು ಸುಟ್ಟು ಹಾಕಿದ್ದಾರೆ.