Saturday, December 14, 2024
Homeಮಲೆನಾಡು ಕರ್ನಾಟಕಶಿವಮೊಗ್ಗಕೋಮು‌ದ್ವೇಷ: ಯುವಕನ ಹತ್ಯೆ

ಕೋಮು‌ದ್ವೇಷ: ಯುವಕನ ಹತ್ಯೆ

ಶಿವಮೊಗ್ಗ: ಇಲ್ಲಿನ ಸೀಗೇಹಟ್ಟಿಯಲ್ಲಿ ಭಾನುವಾರ ರಾತ್ರಿ ಯುವಕರ ಗುಂಪೊಂದು ಅನ್ಯಕೋಮಿನ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದೆ.

ಹರ್ಷ (24) ಮೃತ ಯುವಕ.
ಕೆಲವು ತಿಂಗಳ ಹಿಂದೆ ಮತ್ತೊಂದು ಧರ್ಮವನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ಹಾಕಿದ್ದ ಪ್ರಕರಣ ದೊಡ್ಡಪೇಟೆ ಠಾಣೆಯಲ್ಲಿ ದಾಖಲಾಗಿತ್ತು.

ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ ಆತನಿಗೆ ಹಾಗಾಗ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಮೃತನ ಸಾವಿಗೆ ನ್ಯಾಯಕೊಡಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಮೆಗ್ಗಾನ್ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದವು.

ನಗರದ ಎಲ್ಲೆಡೆ ಬಿಗಿ ಪೊಲೀಸ್ ಪಹರೆ ಹಾಕಲಾಗಿದೆ. ಪೂರ್ವವಲಯ ವ್ಯಾಪ್ತಿಯ ಇತರೆ ಜಿಲ್ಲೆಗಳಿಂದ ರಾತ್ರಿಯೇ ಹೆಚ್ಚುವರಿ ಪೊಲೀಸ್ ಪಡೆ ಕರೆಸಲಾಗಿದೆkk