Saturday, December 14, 2024
Homeಉತ್ತರ ಕರ್ನಾಟಕವಿಜಯಪುರಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ; ಮಹಿಳೆ ಸಾವು

ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಮರ; ಮಹಿಳೆ ಸಾವು

ವಿಜಯಪುರ: ಚಲಿಸುತ್ತಿದ್ದ ಅಟೋ ರಿಕ್ಷಾದ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಆಟೋದಲ್ಲಿದ್ದ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಗರದ ಸೋಲಾಪುರ ರಸ್ತೆಯ ಪೊಲೀಸ್ ತರಬೇತಿ ಕೇಂದ್ರದ ಆವರಣದಲ್ಲಿದ್ದ ಮರ ಏಕಾಏಕಿ ಉರುಳಿ ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಸಿದ್ದಾರೂಢ ಕಾಲೊನಿಯ ನಿವಾಸಿ ಯಲ್ಲಮ್ಮ ಕೊಂಡಗೂಳಿ (45) ಸಾವಿಗೀಡಾಗಿದ್ದಾರೆ.

ಇಂದುತಾಯಿ ಕುಲಕರ್ಣಿ, ಚಂದ್ರಕಲಾ ವಾಲೀಕಾರ, ಮಂದಾಕಿನಿ ಬಡಿಗೇರ, ಸುವರ್ಣಾ ಮಜ್ಜಿಗಿ, ವಿಜಯಪುರ ತಾಲ್ಲೂಕಿನ ಮದಬಾವಿ ತಾಂಡಾದ ಅಟೋ ಚಾಲಕ ಸಚಿನ್‌ ರಾಠೋಡಗೆ ಗಾಯವಾಗಿದೆ.

ಗಾಯಾಳುಗಳಿಗೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಸ್ಥಿತಿ‌ ಗಂಭೀರವಾಗಿದೆ.

ಮರ ರಸ್ತೆ ಮೇಲೆ ಬಿದ್ದಿರುವುದರಿಂದ ಈ ಮಾರ್ಗದಲ್ಲಿ ಗಂಟೆಗಳ ಕಾಲ ಸಂಚಾರ ಬಂದ್‌ ಆಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಮರವನ್ನು ತೆರವುಗೊಳಿಸಿದರು.

ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ದಿ ಹಾಗೂ ಗಾಂಧಿ ಚೌಕಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.