ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಿಷೇಧಿಸಿಬೇಕೆಂದು ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಡಿ.31ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.
ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋವಿಂದು, ಎಂಇಎಸ್ ನಿಷೇಧಿಸುವ ಬಗ್ಗೆ ಡಿ.29ರೊಳಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ಗಡುವಿನೊಳಗೆ ನಿಷೇಧ ಮಾಡದೇ ಇದ್ದರೆ ಬಂದ್ ಮಾಡುತ್ತೇವೆ. 35ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಲಿವೆ ಎಂದರು.
ಬೆಂಗಳೂರಿನಲ್ಲಿ 5 ಲಕ್ಷ ಜನರನ್ನು ಸೇರಿಸಿ ಮೆರವಣಿಗೆ ಮಾಡುವುದಾಗಿ ವಾಟಾಳ್ ಹೇಳಿದರು.