ದಾವಣಗೆರೆ: ದಕ್ಷಿಣ ಕಾಶಿ ಎಂದೇ ಕರೆಯಲಾಗುವ ಹರಿಹರ ನಗರದಲ್ಲಿ ತುಂಗಾಭದ್ರಾ ಆರತಿ ಮಂಟಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕು ಸ್ಥಾಪನೆ ನೆರವೇರಿಸಿದರು.
ತುಂಗಾಭದ್ರಾ ನದಿಯ ತಟದಲ್ಲಿ 108 ಆರತಿ ಮಂಟಪಗಳಿಗೆ ಶಂಕು ಸ್ಥಾಪನೆಯನ್ನು ಗಂಗಾ ಪೂಜೆ ಮಾಡುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು.
ಉತ್ತರ ಭಾರತದ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆಯುವ ಗಂಗಾರತಿ ಕಾರ್ಯಕ್ರಮದಂತೆ ದಕ್ಷಿಣ ಕಾಶಿ ಹರಿಹರದಲ್ಲೂ ತುಂಗಾರತಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಭವ್ಯ ಮಂಟಪ ಹಾಗೂ ಉದ್ಯಾನವನ ಇಲ್ಲಿನ ತುಂಗಾಭದ್ರ ನದಿಯ ತಟದಲ್ಲಿರುವ ರಾಘವೇಂದ್ರ ಮಠದ ಬಳಿ ನೆರವೇರಿತು. ಪಂಚಮಸಾಲಿ ಪೀಠದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ನಿರಾಣಿ, ಭೈರತಿ ಬಸವರಾಜ್, ಸಂಸದ ಸಿದ್ದೇಶ್ವರ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಕೆಲ ಕಾಲ ಧ್ಯಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಂತರ ಕೇಸರಿ ವಸ್ತçದೊಂದಿಗೆ ಪೂಜಾ ಕಾರ್ಯಗಳನ್ನು ನೆರವೇರಿಸಿದರು.