ಶಿವಮೊಗ್ಗ: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಮನೆ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದರಷ್ಟೆ ಸಾಲದು, ಅಕ್ರಮವಾಗಿ ಗಳಿಸಿದ ಹಣ ದೇಶದ ಉಪಯೋಗಕ್ಕೆ ಬಳಸಬೇಕು ಎಂದು ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.
ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಸಮಾಜ ದ್ರೋಹಿ ಕೆಲಸ ಮಾಡಿ ಕೆಟ್ಟ ಹಣ ಗಳಿಸುವವರ ಮುಖವಾಡ ಕಳಚುವ ಕೆಲಸ ನಡೆದಿದೆ ಎಂದು ಸಮರ್ಥಿಸಿಕೊಂಡರು.