ಮೈಸೂರು: ಕಬಿನಿ, ಕಾವೇರಿ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಇಲ್ಲಿನ ಕಾಡಾ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು
ಎರಡೂ ಜಲಾಶಯಗಳೂ ತುಂಬಿವೆ. ಈಗ ನೀರು ಹರಿಸಿದರೆ ಬೇಸಿಗೆ ಬೆಳೆಗಳನ್ನು ಬೆಳೆಯಲು ಸಹಕಾರಿಯಾಗಲಿದೆ. ದನಕರುಗಳಿಗೆ ಮೇವು ಒದಗಿಸಲೂ ಅನುಕೂಲವಾಗಲಿದೆ ಎಂದು ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.
ಬಣ್ಣಾರಿ ಸಕ್ಕರೆ ಕಾರ್ಖಾನೆಯು ಸರ್ಕಾರ ಜಾರಿ ಮಾಡಿರುವ ಕಬ್ಬು ಬೆಳೆಗಾರರ ದ್ವಿಪಕ್ಷೀಯ ಒಪ್ಪಂದ ಪತ್ರವನ್ನು ತನಗೆ ಬೇಕಾದಂತೆ ಬದಲಾಯಿಸಿಕೊಂಡಿದ್ದು, ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು