ಕಾನಪೂರ : ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಕ್ರಿಕೆಟ್ನಲ್ಲಿ ಪದಾರ್ಪಣೆಯ ಪಂದ್ಯದಲ್ಲಿಯೇ ಶ್ರೇಯಸ್ ಅಯ್ಯರ್ ಶತಕ ದಾಖಲಿಸಿದರು. ಈ ಸಾಧನೆ ಮಾಡಿದ ಭಾರತದ 16ನೇ ಆಟಗಾರನಾದರು.
ಗ್ರೀನ್ ಪಾರ್ಕ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ನಲ್ಲಿ ಅಯ್ಯರ್ ಶತಕದ ಬಲದಿಂದ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 111.1 ಓವರ್ಗಳಲ್ಲಿ 345 ರನ್ ಗಳಿಸಿತು. ಅದಕ್ಕುತ್ತರವಾಗಿ ನ್ಯೂಜಿಲೆಂಡ್ ತಂಡವು ಶುಕ್ರವಾರ ದಿನದಾಟದ ಅಂತ್ಯಕ್ಕೆ 57 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 129 ರನ್ ಗಳಿಸಿದೆ.
ಮುಂಬೈನ 26 ವರ್ಷದ ಶ್ರೇಯಸ್ ಅಯ್ಯರ್ 171 ಎಸೆತಗಳಲ್ಲಿ 105 ರನ್ ಗಳಿಸಿದರು. ಅವರ ಶತಕದ ನೆರೆವಿನಿಂದ ಭಾರತ 345 ರನ್ ಗಳಿಸಿ ಆಲೌಟ್ ಆಗಿದೆ. ಅದಕ್ಕೆ ದಿಟ್ಟವಾಗಿ ಉತ್ತರ ನೀಡುತ್ತಿರುವ ನ್ಯೂಜಿಲೆಂಡ್ ಎರಡನೇ ದಿನದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 129 ರನ್ ಗಳಿಸಿದೆ.