ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್‌ಗೆ ತಲಾ ₹ 7 ತೆರಿಗೆ ಇಳಿಕೆ ಮಾಡಿದೆ.
ಕೇಂದ್ರ ಸರ್ಕಾರದ ಆದೇಶ ಹೊರಬಿದ್ದ ಬಳಿಕ ಟ್ವಿಟರ್‌ನಲ್ಲಿ ಈ ವಿಷಯ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀ.ಗೆ ₹ 7ರಷ್ಟು ಕಡಿಮೆ ಮಾಡಲಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ₹ 2,100 ಕೋಟಿಯಷ್ಟು ಹೊರೆಯಾಗಲಿದೆ’ ಎಂದು ತಿಳಿಸಿದ್ದಾರೆ.
ಗುರುವಾರ ಸಂಜೆಯಿಂದಲೇ ದರ ಇಳಿಕೆ ನಿರ್ಧಾರ ಅನ್ವಯವಾಗಲಿದೆ. ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹ 95.50 ಮತ್ತು ಪ್ರತಿ ಲೀ. ಡೀಸೆಲ್ ದರ ₹ 81.50ಗೆ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.