ಚಿತ್ರದುರ್ಗ : ದಾವಣಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕ ಇದ್ದಕ್ಕಿದ್ದಂತೆ ಎಚ್ಚರ ತಪ್ಪಿದಾಗ ಸಮಯಪ್ರಜ್ಞೆ ಮೆರೆದ ನಿರ್ವಾಹಕ ಹ್ಯಾಂಡ್ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿ ಅವಘಡವನ್ನು ತಪ್ಪಿಸಿದ್ದಾರೆ.
ಹಿರುಯೂರು ಗಾಂಧಿ ವೃತ್ತದಲ್ಲಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ.
50 ವರ್ಷ ವಯಸ್ಸಿನ ಬಸ್ಸಿನ ಚಾಲಕ ರವಿ ಇದ್ದಕ್ಕಿದ್ದಂತೆ ಪ್ರಜ್ಞೆ ಕಳೆದುಕೊಂಡಿದ್ದಾರೆ. ನಿರ್ವಾಹಕ ಗಂಗಾಧರ್ ಹ್ಯಾಂಡ್ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿದ್ದಾರೆ. ಬಳಿಕ ರವಿ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಬಸ್ಸಿನಲ್ಲಿ 10 ಪ್ರಯಾಣಿಕರಿದ್ದು ಯಾವುದೇ ಅಪಾಯ ಸಂಭವಿಸಿಲ್ಲ .