Monday, May 19, 2025
Homeರಾಜ್ಯಬೆಂಗಳೂರು ವಿಭಾಗಬಿಟ್‌ ಕಾಯಿನ್‌: ಸಿಜೆಗೆ ಪತ್ರ

ಬಿಟ್‌ ಕಾಯಿನ್‌: ಸಿಜೆಗೆ ಪತ್ರ

ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್‌ ಹಗರಣದ ತನಿಖೆ ನಡೆಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಎಸ್‌ಐಟಿ ನೇಮಿಸುವಂತೆ ನಿರ್ದೇಶಿಸಬೇಕು’ ಎಂದು ಕೋರಿ ‘ಸಿಟಿಜನ್‌ ರೈಟ್ಸ್‌ ಫೌಂಡೇಶನ್‌’ ಅಧ್ಯಕ್ಷ ಕೆ.ಎ.ಪಾಲ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ (ಸಿಜೆ) ಪತ್ರ ಬರೆದಿದ್ದಾರೆ.

‘ಪ್ರಕರಣದ ಪ್ರಮುಖ ಆರೋಪಿ ಶ್ರೀ ಕೃಷ್ಣ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪರಾಧಿಕ ನಂಟು ಹೊಂದಿದ್ದಾನೆ. ಪ್ರಕರಣದಲ್ಲಿ ದೋಷಾರೋಪ ಪಟ್ಟಿಯನ್ನು ತರಾತುರಿಯಲ್ಲಿ ಸಲ್ಲಿಸಲಾಗಿದೆ. ಹಾಗಾಗಿ ಸಂಬಂಧಿತ ಅಧಿಕಾರಿಗಳ ಕರ್ತವ್ಯಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆಯ ಅಗತ್ಯವಿದೆ’ ಎಂದು ಅವರು ಎರಡು ಪುಟಗಳ ಪತ್ರದಲ್ಲಿ ತಿಳಿಸಿದ್ದಾರೆ.