ನವದೆಹಲಿ: ಭಾರತ ಕ್ರಿಕೆಟ್ ತಂಡಕ್ಕೆ ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ಬುಧವಾರ ನೇಮಕ ಮಾಡಲಾಗಿದೆ.
ಬೆಂಗಳೂರಿನ ರಾಹುಲ್, ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿದ್ದಾರೆ. ಮುಂದಿನ ತಿಂಗಳು ಭಾರತದಲ್ಲಿಯೇ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಕಾರ್ಯಾರಂಭ ಮಾಡಲಿದ್ದಾರೆ. 2023ರ ಏಕದಿನ ವಿಶ್ವಕಪ್ ಟೂರ್ನಿಯವರೆಗೂ ಅವರು ಕೆಲಸ ಮಾಡಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.