Saturday, December 14, 2024
Homeಉತ್ತರ ಕರ್ನಾಟಕಬೆಳಗಾವಿಮತಾಂತರ ನಿಷೇಧ ವಿರುದ್ಧ ಹೋರಾಟ: ಸಿದ್ದರಾಮಯ್ಯ

ಮತಾಂತರ ನಿಷೇಧ ವಿರುದ್ಧ ಹೋರಾಟ: ಸಿದ್ದರಾಮಯ್ಯ

ಬೆಳಗಾವಿ: ‘ಬಿಜೆಪಿ ಸರ್ಕಾರದವರು ಮತಾಂತರ ನಿಷೇಧ ಮಸೂದೆ ಮಂಡಿಸಿದ್ದು, ಕಾಯ್ದೆ ಮಾಡಿ ಕಳ್ಳರಂತೆ ಜಾರಿಗೆ ತರುತ್ತಿದ್ದಾರೆ. ಇದರ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲಾಗುವುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ನೆರೆಯಿಂದ ಮನೆ ಕಳೆದುಕೊಂಡವರಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು’ ಎಂದು ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾಧ್ಯಮಗಳನ್ನು ಹೊರಗಿಟ್ಟು ಚರ್ಚಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ’ ಎಂದು ಟೀಕಿಸಿದರು.

‘ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿವೆ. ಆದರೆ, ಸರ್ಕಾರಕ್ಕೆ ಅವುಗಳ ಬಗ್ಗೆ ಚಿಂತೆ ಇಲ್ಲ’ ಎಂದು ಆರೋಪಿಸಿದರು.