ರಾಮನಗರ: ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯು ಮೊಟಕುಗೊಂಡಿದೆ. ಕೊರೊನಾ ಆರ್ಭಟ ಮುಗಿದ ಬಳಿಕ ಇಲ್ಲಿಂದಲೇ ಮುಂದುವರಿಸಲು ನಿರ್ಧರಿಸಲಾಗಿದೆ.
ರಾಮನಗರ ಜಿಲ್ಲಾ ಕಚೇರಿಯಲ್ಲಿ ನಡೆದ ಪಕ್ಷದ ನಾಯಕರ ಸಭೆಯ ಬಳಿಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ನಿರ್ಧಾರ ಪ್ರಕಟಿಸಿದರು. ನಾವು ಎರಡು ತಿಂಗಳ ಹಿಂದೆ ಪಾದಯಾತ್ರೆ ಘೋಷಿಸಿದಾಗ ಕೊರೊನಾ ಹಾವಳಿ ಇರಲಿಲ್ಲ. ಹೀಗಾಗಿ ಪಾದಯಾತ್ರೆ ಆರಂಭಿಸಿದೆವು. ಈಗ ಕೋವಿಡ್ ಸೋಂಕುಹೆಚ್ಚಾದ ಕಾರಣ ಇಲ್ಲಿಗೆ ನಿಲ್ಲಿಸುತ್ತಿದ್ದೇವೆ. ಮುಂದೆ ಇದೇ ನೆಲದಿಂದ ಮತ್ತೆ ಪಾದಯಾತ್ರೆ ಆರಂಭ ಆಗಲಿದೆ ಎಂದರು.
ನಮ್ಮ ಐತಿಹಾಸಿಕ ಹಿನ್ನೆಲೆಯುಳ್ಳ ರಾಜಕೀಯ ಪಕ್ಷ. ನಮಗೆ ನಮ್ಮದೇ ಆದ ಹಿನ್ನೆಲೆ ಇದೆ. ನಮ್ಮ ಜವಾಬ್ದಾರಿ ನಿರ್ವಹಿಸುತ್ತೇವೆ ಎಂದರು.