Saturday, December 14, 2024
Homeರಾಜ್ಯಬೆಂಗಳೂರು ವಿಭಾಗಯಲಹಂಕ ಪ್ರವಾಹ ಪೀಡಿತ ಪ್ರದೇಶಕ್ಕೆ ಸಿಎಂ ಭೇಟಿ

ಯಲಹಂಕ ಪ್ರವಾಹ ಪೀಡಿತ ಪ್ರದೇಶಕ್ಕೆ ಸಿಎಂ ಭೇಟಿ

ಬೆಂಗಳೂರು: ಯಲಹಂಕದಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ದಿಢಿರ್ ಭೇಟಿ ನೀಡಿ ಪರಿಶೀಲಿಸಿದರು.

ಯಲಹಂಕ ವಲಯದ ಕೇಂಪೇಗೌಡ ವಾರ್ಡನಲ್ಲಿ ಜಲಾವೃತಗೊಂಡಿದ್ದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಭವಿಷ್ಯದಲ್ಲಿ ಇಂತಹ ಅನಾಹುತ ನಡೆಯದಂತೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಈ ವೇಳೆ ಸ್ಥಳೀಯ ಶಾಸಕರು ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ವಲಯ ಆಯುಕ್ತ ದಯಾನಂದ್, ಜಂಟಿ ಆಯುಕ್ತರಾದ ಪೂರ್ಣಿಮಾ ಉಪಸ್ಥಿತರಿದ್ದರು.