ಮರಿಯಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಗಿಮಾವಿನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ಸುಣಗಾರ ಸೋಮನಾಥ (35) ಮೃತ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.