Saturday, December 14, 2024
Homeಮೈಸೂರು ವಿಭಾಗಮೈಸೂರುರಸ್ತೆ ಗುಂಡಿ ಮುಚ್ಚಲು ಆಗ್ರಹಿಸಿ ಪ್ರತಿಭಟನೆ 

ರಸ್ತೆ ಗುಂಡಿ ಮುಚ್ಚಲು ಆಗ್ರಹಿಸಿ ಪ್ರತಿಭಟನೆ 

ಮೈಸೂರು: ಇಲ್ಲಿನ ಕೃಷ್ಣಮೂರ್ತಿಪುರಂನ ಶ್ರೀರಾಮಮಂದಿರದ ಸಮೀಪ ಭಾನುವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಅಪಘಾತದಿಂದ ಗಂಗೋತ್ರಿ ಬಡಾವಣೆ ನಿವಾಸಿ ದರ್ಶನ್ ಕುಮಾರ್(30) ಮೃತಪಟ್ಟರು.
ಅಪಘಾತಕ್ಕೆ ರಸ್ತೆಗಳೆ ಗುಂಡಿಗಳೇ ಕಾರಣ ಎಂದು ಆರೋಪಿಸಿದ ಮೈಸೂರು ಪ್ರಜ್ಞಾವಂತರ ವೇದಿಕೆಯ ಕಾರ್ಯಕರ್ತರು ಸೋಮವಾರ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಬಹುತೇಕ ಎಲ್ಲಾ ರಸ್ತೆಗಳಲ್ಲೂ ಗುಂಡಿಗಳಿದ್ದು, ಇವುಗಳಿಂದ ನಿತ್ಯ ಅಪಘಾತಗಳು ಸಂಭವಿಸುತ್ತಿವೆ. ಕೂಡಲೇ ಗುಂಡಿ ಮುಚ್ಚುವ ಕೆಲಸ ಆಗಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.