Saturday, December 14, 2024
Homeಮೈಸೂರು ವಿಭಾಗಮಂಡ್ಯರಾಜ್ಯಮಟ್ಟದ ಯುವಜನೋತ್ಸವಕ್ಕೆ ಚಾಲನೆ

ರಾಜ್ಯಮಟ್ಟದ ಯುವಜನೋತ್ಸವಕ್ಕೆ ಚಾಲನೆ

ಮಂಡ್ಯ: ಆದಿಚುಂಚನಗಿರಿ ಮಠದ ಆವರಣದಲ್ಲಿ ಎರಡು ದಿನಗಳ ರಾಜ್ಯಮಟ್ಟದ ಯುವಜನೋತ್ಸವಕ್ಕೆ ಮಂಗಳವಾರ ಥಾವರ್‌ಚಂದ್ ಗೆಹಲೋತ್‌ ಚಾಲನೆ ನೀಡಿದರು.

ರಾಜ್ಯದ ವಿವಿಧೆಡೆಯಿಂದ 3 ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಮಠದ ಆವರಣದಲ್ಲಿ ಕಲಾವಿದರು, ತೀರ್ಪುಗಾರರು ತಂಗಲು ಸಕಲ ವ್ಯವಸ್ಥೆ ಮಾಡಲಾಗಿದೆ. ಜನಪದ ಗೀತೆ, ನೃತ್ಯ, ಏಕಾಂತ ನಾಟಕ, ಶಾಸ್ತ್ರೀಯ ನೃತ್ಯ, ಗಾಯನ, ಆಶುಭಾಷಣ ಸೇರಿ ವಿವಿಧ ಸ್ಪರ್ಧೆಗಳು ನಡೆಯಲಿವೆ.

ಸಮಾರಂಭದಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್, ಶಾಸಕ ಸುರೇಶ್ ಗೌಡ ಭಾಗವಹಿಸಿದ್ದರು.