ಮೈಸೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳು ಇಲ್ಲಿನ ಕ್ರಾಫರ್ಡ್ ಸಭಾಂಗಣದ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ನೇತೃತ್ವದಲ್ಲಿ ಸೇರಿದ ವಿದ್ಯಾರ್ಥಿಗಳು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸರ್ಕಾರ ದಿಢೀರ್ ಆಗಿ ಹೇರುತ್ತಿದೆ ಎಂದು ಕಿಡಿಕಾರಿದರು.
ಮೈಸೂರು ವಿಶ್ವವಿದ್ಯಾನಿಲಯವು ಈ ನೀತಿಯನ್ನು ಸರಿಯಾಗಿ ವಿಮರ್ಶಿಸದೆ, ಪೂರ್ವಾಪರಗಳನ್ನು ವಿವೇಚಿಸದೆ ಜಾರಿಗೆ ತರುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹಲವು ವಿಧದ ಸಮಸ್ಯೆಗಳಾಗುತ್ತಿವೆ ಎಂದು ದೂರಿದರು.
ಸರ್ಕಾರ ಮತ್ತು ಮೈಸೂರು ವಿಶ್ವವಿದ್ಯಾನಿಲಯವು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಡಬೇಕು. ಬೋಧಕರ ನೇಮಕಾತಿ ನಡೆಸಿ ತರಗತಿಗಳನ್ನು ನಡೆಸಬೇಕು ಎಂದು ಆಗ್ರಹಿಸಿದರು.