Saturday, December 14, 2024
Homeರಾಜ್ಯಬೆಂಗಳೂರು ವಿಭಾಗವಸತಿ ಸಮುಚ್ಚಯದಲ್ಲಿ ಬೆಂಕಿ

ವಸತಿ ಸಮುಚ್ಚಯದಲ್ಲಿ ಬೆಂಕಿ

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿಯ ವಸುಂಧರಾ ಲೇಔಟ್‌ನ ವಸತಿ ಸಮುಚ್ಚಯದಲ್ಲಿ ಮಂಗಳವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ.

ಸಮುಚ್ಚಯದಲ್ಲಿ ಬೆಂಕಿ ಹೊತ್ತಿಕೊಂಡಿರುವುದು ತಿಳಿದೊಡನೆಯೇ ಫ್ಲ್ಯಾಟ್‌ಗಳಲ್ಲಿದ್ದವರೆಲ್ಲಾ ಓಡೋಡಿ ಹೊರಗೆ ಬಂದಿದ್ದಾರೆ. ವಿ ಮ್ಯಾಕ್ಸ್‌ ಚಾಲೇಟ್‌ ವಸತಿ ಸಮುಚ್ಚಯದಲ್ಲಿ ಆವರಿಸಿದ್ದ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಡುತ್ತಿದ್ದ ದೃಶ್ಯ ಕಂಡುಬಂತು.  

ಸಿಲಿಂಡರ್‌ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರುವ ಅನುಮಾನವಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಬೆಂಕಿಯಿಂದಾಗಿ ಫ್ಲ್ಯಾಟ್‌ವೊಂದರಲ್ಲಿದ್ದ ಸಾಮಾನು ಸರಂಜಾಮುಗಳು ಸುಟ್ಟು ಹೋಗಿದ್ದು ಸುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ.