ವಿಜಯಪುರ: ಸಿಂದಗಿ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಪಟ್ಟಣದ ಗಾಂಧಿ ಚೌಕಿಯಿಂದ ಸಾವಿರಾರು ಬೆಂಬಲಿಗರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಆಗಮಿಸಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಶಾಸಕರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ ಸೇರಿದಂತೆ ಮತ್ತಿತರರು ಇದ್ದರು.