ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂಟ್ವಾಳಕ್ಕೆ ತೆರಳುತ್ತಿದ್ದ ವೇಳೆ ಎಸ್‌ಡಿಪಿಐ ಕಾರ್ಯಕರ್ತರು ಫರಂಗಿಪೇಟೆಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಮುತ್ತಿಗೆಗೆ ಯತ್ನಿಸಿದರು.
ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಹೋಗುತ್ತಿದ್ದಾಗ, ಎಸ್‌ಡಿಪಿಐ ಕಾರ್ಯಕರ್ತರು ಗೋ ಬ್ಯಾಕ್ ಸಿಎಂ ಎಂದು ಘೋಷಣೆ ಕೂಗಿ ಮುತ್ತಿಗೆಗೆ ಯತ್ನಿಸಿದರು. ಕೂಡಲೇ ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿ ಕಾರ್ಯಕರ್ತರನ್ನು ತಡೆದಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.