Saturday, December 14, 2024
Homeರಾಜ್ಯಉತ್ತರ ಕರ್ನಾಟಕಹುಚ್ಚು ನರಿ ದಾಳಿ: ವ್ಯಕ್ತಿ ಸಾವು

ಹುಚ್ಚು ನರಿ ದಾಳಿ: ವ್ಯಕ್ತಿ ಸಾವು

ಗದಗ: ಹುಚ್ಚು ನರಿ ಕಡಿದು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಾಗಿದ್ದ ಡಂಬಳ ಗ್ರಾಮದ ಕಲ್ಲಪ್ಪ ಸಣ್ಣಪ್ಪ ದಾಳಿನ (59) ಚಿಕಿತ್ಸೆಗೆ ಸ್ಪಂದಿಸದೆ ಈಚೆಗೆ ಮೃತಪಟ್ಟರು.

ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಈಚೆಗೆ ಈ ಘಟನೆ ಸಂಭವಿಸಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮುಂಡರಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಾಗಿದ್ದರು.

ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಸಂಬಂಧಿಕರು ಒತ್ತಾಯಿಸಿದ್ದಾರೆ.

‘ವಲಯ ಅರಣ್ಯಾಧಿಕಾರಿ ಪ್ರದೀಪ ಪವಾರ, ಹುಚ್ಚು ನರಿ ಕಡಿತದಿಂದ ವ್ಯಕ್ತಿ ಮೃತಪಟ್ಟಿರುವ ಕುರಿತು ನಮಗೆ ದಾಖಲೆಗಳು ಲಭ್ಯವಾಗಿಲ್ಲ. ಮೃತರ ಸಂಬಂಧಿಕರಿಗೂ ಅಗತ್ಯ ದಾಖಲೆಗಳನ್ನು ನೀಡುವಂತೆ ಸೂಚನೆ ನೀಡಿದ್ದೇನೆ. ಪರಿಹಾರ ನೀಡಲು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದು ತಿಳಿಸಿದರು.