Monday, May 19, 2025
Homeಮಧ್ಯ ಕರ್ನಾಟಕತುಮಕೂರು115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ

115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ

ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಹುಟ್ಟುಹಬ್ಬದ ಪ್ರಯುಕ್ತ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ ಮಾಡುವ ಕಾರ್ಯಕ್ರಮ ಮಠದ ಆವರಣದಲ್ಲಿ ಶುಕ್ರವಾರ ನಡೆಯಿತು.

ಬೆಂಗಳೂರಿನ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್ ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು. ರಾಜ್ಯದ ನಾನಾ ಭಾಗಗಳಿಂದ ಮಠಕ್ಕೆ ಬಂದಿದ್ದ ಮಕ್ಕಳಿಗೆ ನಾಮಕರಣ ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ತೊಟ್ಟಿಲು, ಹಾಸಿಗೆ ಸೇರಿದಂತೆ ಇತರೆ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು.

ರಾಜ್ಯದ ಬೀದರ್, ರಾಯಚೂರು ಸೇರಿದಂತೆ ಎಲ್ಲ ಭಾಗದಿಂದ ಎಲ್ಲ ಧರ್ಮದ ಮಕ್ಕಳು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಡ ಮಕ್ಕಳಿಗೆ ನಾಮಕರಣ ಮಾಡುವ ಮೂಲಕ ಮಕ್ಕಳಿಗೆ ಬೇಕಾದ ಎಲ್ಲ ಪರಿಕರಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಅನ್ನದಾನ ಸೇವಾ ಟ್ರಸ್ಟ್ ಅಧ್ಯಕ್ಷ ಜಯಣ್ಣ ಹೇಳಿದರು.

ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಯ ಹೆಸರು ನಾಮಕರಣ ಮಾಡುವ ಮೂಲಕ ಸ್ವಾಮೀಜಿಯ ಹೆಸರನ್ನು ಎಲ್ಲ ಕಡೆ ಹರಡುವ ಕೆಲಸ ಮಾಡಲಾಗುತ್ತಿದೆ. ಕಳೆದು ಮೂರು ವರ್ಷಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಟ್ರಸ್ಟ್ ನ ಸದಸ್ಯೆ ಅನುರಾಧ ವಿ.ಪಾಟೀಲ ಹೇಳಿದರು.