ಬೆಂಗಳೂರು : ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.