ಮುಂಬೈ: ನ್ಯೂಜಿಲೆಂಡ್ ವಿರುದ್ಧದ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 372 ರನ್ ಗಳ ಭಾರಿ ಅಂತರದಿಂದ ಜಯ ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಸರಣಿಯನ್ನು ಗೆದ್ದುಕೊಂಡಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 539 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಕಿವೀಸ್ ಪಡೆ ಕೇವಲ 167 ರನ್ ಗಳಿಗೆ ಆಲೌಟ್ ಆಗುವ ಮೂಲಕ ಭಾರತದ ವಿರುದ್ಧ 372 ರನ್ ಗಳ ಹೀನಾಯ ಸೋಲು ಕಂಡಿತು.
ಮೂರನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ ಐದು ವಿಕೆಟ್ ಕಳೆದುಕೊಂಡು 141 ರನ್ ಗಳಿಸಿತ್ತು. ನಾಲ್ಕನೇ ದಿನ ಜಯಂತ್ ಯಾದವ್ ಸ್ಪಿನ್ ಸುಳಿಗೆ ಸಿಲುಕಿದ ನ್ಯೂಜಿಲೆಂಡ್ ಪಡೆ ಭಾರತಕ್ಕೆ ಸುಲಭ ತುತ್ತಾಯಿತು. 28 ರನ್‌ಗಳ ಅಂತರದಲ್ಲಿ ಕೊನೆಯ 5 ವಿಕೆಟ್ ಕಳೆದುಕೊಳ್ಳುವ ಮೂಲಕ ನ್ಯೂಜಿಲೆಂಡ್ ಭಾರತದ ವಿರುದ್ಧ ಭಾರೀ ಅಂತರದಿಂದ ಸೋಲು ಅನುಭವಿಸಿದೆ. ಈ ಮೂಲಕ ಭಾರತ ತವರಿನಲ್ಲಿ ನಡೆದ ಟಿ20 ಹಾಗೂ ಟೆಸ್ಟ್ ಸರಣಿಯಲ್ಲಿ ಒಂದೂ ಸೋಲು ಕಾಣದೆ ಗೆದ್ದು ಬೀಗಿದೆ.