ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಲಾಗಿದೆ.
ಅಗ್ನಿಶಾಮಕದಳದ ಸಿಬ್ಬಂದಿಗಳು ಹಾಗೂ ಸ್ಥಳೀಯರು ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅವಘಡಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇತ್ತು ಎನ್ನಲಾಗಿದೆ. ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಅಗ್ನಿಶಾಮಕದಳಕ್ಕೆ ಮಾಹಿತಿಯನ್ನು ತಲುಪಿಸಿದರು. ಹಗ್ಗ ಹಾಗೂ ಬಲೆಯ ಸಹಾಯದಿಂದ ಮಹಿಳೆಯನ್ನು ಮೇಲಕ್ಕೆ ಎತ್ತಲಾಯಿತು. ಮಹಿಳೆಗೆ ಗಂಭೀರವಾದ ಗಾಯವಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.