Saturday, December 14, 2024
Homeರಾಜ್ಯಉತ್ತರ ಕರ್ನಾಟಕಉಪಚುನಾವಣೆ ಮತ ಎಣಿಕೆ ಆರಂಭ: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್‌ ಮುನ್ನಡೆ

ಉಪಚುನಾವಣೆ ಮತ ಎಣಿಕೆ ಆರಂಭ: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್‌ನಲ್ಲಿ ಕಾಂಗ್ರೆಸ್‌ ಮುನ್ನಡೆ

ಬೆಂಗಳೂರು: ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳವಾರ ಬೆಳಿಗ್ಗೆ ಆರಂಭಗೊಂಡಿದೆ.

ಮೊದಲ ಸುತ್ತು ಮುಗಿಯುವ ಹೊತ್ತಿಗೆ ಸಿಂದಗಿಯಲ್ಲಿ ಬಿಜೆಪಿ ಮತ್ತು ಹಾನಗಲ್‌ನಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ.

ಮೊದಲ ಸುತ್ತಿನಲ್ಲಿ ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರ 5255 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್‌ನ ಅಶೋಕ ಮನಗೂಳಿ 2054 ಮತ ಪಡೆದಿದ್ದಾರೆ. ಜೆಡಿಎಸ್‌ನ ನಾಜಿಯಾ ಅಂಗಡಿ 73 ಮತ ಪಡೆದಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿಯ ಡಾ. ಸುನಿಲ್‌ ಕುಮಾರ್‌ 36 ಮತ ಪಡೆದಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ 4478 ಮತ, ಬಿಜೆಪಿಯ ಶಿವರಾಜ ಸಜ್ಜನ್‌ 4296 ಮತ ಹಾಗೂ ಜೆಡಿಎಸ್‌ನ ನಿಯಾಜ್‌ ಶೇಖ್‌ 25 ಮತ ಪಡೆದಿದ್ದಾರೆ.

ಶ್ರೀನಿವಾಸ ಮಾನೆ
ರಮೇಶ್‌ ಭೂಸನೂರ