ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಗ್ರಾಮವೊಂದರಲ್ಲಿ 10 ವರ್ಷದ ಬಾಲಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಆರೋಪಿ ಮಹೇಶ್ (30) ಎಂಬಾತನನ್ನು ಬಂಧಿಸಲಾಗಿದೆ.
ಗ್ರಾಮದಲ್ಲಿ ಬುಧವಾರ ಸಂಜೆ ಸರ್ಕಾರಿ ಶಾಲೆ ಬಿಟ್ಟ ನಂತರ ಬಾಲಕಿ ಹಾಗೂ ಆಕೆಯ ಸ್ನೇಹಿತೆ ಶಾಲೆಯಲ್ಲಿಯೇ ಹೋಂವರ್ಕ್ ಮಾಡುತ್ತಿದ್ದರು. ಆಗ ಆರೋಪಿಯು ಆಕೆಯ ಸ್ನೇಹಿತೆಯನ್ನು ಗದರಿಸಿ ಹೊರಗೆ ಕಳುಹಿಸಿ, ನಂತರ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೋಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೋಕ್ಸೊ ಕಾಯ್ದೆಯ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಿಪಿಐ ಟಿ.ವಿ. ದೇವರಾಜ್ ತಿಳಿಸಿದ್ದಾರೆ.