Saturday, December 14, 2024
Homeಉತ್ತರ ಕರ್ನಾಟಕಗದಗ‘ಸೋಲಿನ ಭಯದಿಂದ ಕೃಷಿ ಕಾಯ್ದೆಗಳನ್ನು ಹಿಂಪಡೆದ ಪಿಎಂ’

‘ಸೋಲಿನ ಭಯದಿಂದ ಕೃಷಿ ಕಾಯ್ದೆಗಳನ್ನು ಹಿಂಪಡೆದ ಪಿಎಂ’

ಗೆ

ಮುಂಡರಗಿ (ಗದಗ ಜಿಲ್ಲೆ): ರೈತರಿಗೆ ಮಾರಕವಾಗಿದ್ದ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ದೇಶದ ವಿವಿಧ ಭಾಗಗಳಲ್ಲಿ ರೈತರು ನಿರಂತರ ಹೋರಾಟ ಕೈಗೊಂಡಿದ್ದರು. ಅದರ ಫಲವಾಗಿ ಸರ್ಕಾರ ಇಂದು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆದಿರುವುದು ರೈತ ಸಮುದಾಯದಲ್ಲಿ ಹರ್ಷ ಮೂಡಿಸಿದೆ.

ಕೃಷಿ ಕಾಯ್ದೆ ವಿರೋಧಿಸಿ ಕೈಗೊಂಡಿದ್ದ ಸುದೀರ್ಘ ಹೋರಾಟದಲ್ಲಿ ಹಲವಾರು ರೈತರು ತಮ್ಮ ಜೀವವನ್ನು ಕಳೆದುಕೊಂಡು ಹುತಾತ್ಮರಾಗಿದ್ದರು. ರೈತರ ತ್ಯಾಗ, ಬಲಿದಾನಗಳು ವ್ಯರ್ಥವಾಗಲಿಲ್ಲ. ನಮ್ಮ ಹೋರಾಟ ಮತ್ತು ಶ್ರಮ ಇಂದು ಸಾರ್ಥಕವಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರು ತುಂಬಾ ಬುದ್ಧಿವಂತರಾಗಿದ್ದು, ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ವಿವಿಧ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಾಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲು ಖಚಿತ ಎಂದು ಅರ್ಥ ಮಾಡಿಕೊಂಡಿದ್ದಾರೆ. ಚುನಾವಣೆಯ ಸೋಲಿನ ಭಯದಿಂದಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಂಡಿದ್ದಾರೆ. ರೈತರ ಅಡ್ಡಿ ಆತಂಕಗಳು ಈಗ ದೂರವಾಗಿವೆ.

ವೀರನಗೌಡ ಪಾಟೀಲಪ್ರಧಾನ ಕಾರ್ಯದರ್ಶಿ, ರಾಜ್ಯ ಕಬ್ಬು ಬೆಳೆಗಾರರ ಸಂಘ, ಮುಂಡರಗಿ