ಹುಬ್ಬಳ್ಳಿ: ಹುಧಾ ಮಹಾನಗರ ಪಾಲಿಕೆಗೆ ಚುನಾಯಿತರಾದ ಜನಪ್ರತಿನಿಧಿಗಳಿಗೆ ತಕ್ಷಣ ಅಧಿಕಾರ ನೀಡಬೇಕು. ಇಲ್ಲದಿದ್ದರೆ ಹೊಸ ವರ್ಷದ ಆರಂಭದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರಿ ಎಚ್ಚರಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳ ಆಡಳಿತವಿಲ್ಲದೆ ಮೂರು ವರ್ಷ ಸಮೀಪಿಸುತ್ತಿದೆ. ನೂತನ ಜನಪ್ರತಿನಿಧಿಗಳು ಆಯ್ಕೆಯಾಗಿ ನಾಲ್ಕು ತಿಂಗಳು ಕಳೆಯುತ್ತಿದ್ದರೂ, ಅವರಿಗೆ ಇನ್ನೂ ಅಧಿಕಾರ ಕೊಟ್ಟಿಲ್ಲ. ಪಾಲಿಕೆಯಲ್ಲಿ ಅಧಿಕಾರಿಗಳು ಬೇಕಾಬಿಟ್ಟಿಯಾಗಿ ವರ್ತಿಸುತ್ತಿದ್ದಾರೆ. ಸರ್ಕಾರ ಇದನ್ನು ನೋಡಿಯೂ ಸುಮ್ಮನಿದೆ ಎಂದು ಆರೋಪಿಸಿದರು.
ಪಾಲಿಕೆ ಸದಸ್ಯರಾದ ಇಮ್ರಾನ್ ಯಲಿಗಾರ, ಶಂಕರ ಹೊಸಮನಿ ಇದ್ದರು.