Monday, May 19, 2025
Homeಸುದ್ದಿಹುಬ್ಬಳ್ಳಿಗೆ ವಿಮಾನ ಚಾಲನಾ ತರಬೇತಿ ಕೇಂದ್ರ: ಸಚಿವ ಜೋಶಿ

ಹುಬ್ಬಳ್ಳಿಗೆ ವಿಮಾನ ಚಾಲನಾ ತರಬೇತಿ ಕೇಂದ್ರ: ಸಚಿವ ಜೋಶಿ

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಆರಂಭಿಸಲು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಒಪ್ಪಿಗೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಇಲಾಖಾ ಸಚಿವ ಪ್ರಲ್ಹಾದ ಜೋಶಿ ‘ದೇಶದಲ್ಲಿ ವಿಮಾನ ಚಾಲನೆ ಮಾಡುವ ಪೈಲಟ್‍ಗಳ ಕೊರತೆ ನೀಗಿಸಲು ವಿವಿಧೆಡೆ ಆರು ವಿಮಾನ ತರಬೇತಿ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಸ್ಥಾಪಿಸುತ್ತಿದ್ದು, ಹುಬ್ಬಳ್ಳಿಯಲ್ಲೂ ಒಂದು ಕೇಂದ್ರ ಸ್ಥಾಪನೆಯಾಗಲಿದೆ’ ಎಂದು ಹೇಳಿದ್ದಾರೆ.

‘ಉತ್ತರ ಕರ್ನಾಟಕದಲ್ಲಿ ವಿಮಾನ ಚಾಲನಾ ತರಬೇತಿ ಬಯಸುವ ಯುವಕರಿಗೆ ಇದೊಂದು ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಈ ಕೇಂದ್ರ ಸ್ಥಾಪನೆಯಿಂದ ಕೈಗಾರಿಕೋದ್ಯಮಕ್ಕೂ ಸಹಕಾರಿಯಾಗಲಿದೆ’ ಎಂದಿದ್ದಾರೆ.