Saturday, December 14, 2024
Homeಮಧ್ಯ ಕರ್ನಾಟಕದಾವಣಗೆರೆವಿಷಾಹಾರ ಸೇವನೆ: 47 ಮಕ್ಕಳು ಅಸ್ವಸ್ಥ 

ವಿಷಾಹಾರ ಸೇವನೆ: 47 ಮಕ್ಕಳು ಅಸ್ವಸ್ಥ 

ಹೊನ್ನಾಳಿ: ತಾಲ್ಲೂಕಿನ ಅರಬಗಟ್ಟೆಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ತಿಂದು 47 ಮಕ್ಕಳು ಅಸ್ವಸ್ಥರಾಗಿದ್ದಾರೆ.
ಶುಕ್ರವಾರ ಬೆಳಿಗ್ಗೆ ಉಪಾಹಾರಕ್ಕೆ ಮಕ್ಕಳಿಗೆ ಉಪ್ಪಿಟ್ಟು ನೀಡಲಾಗಿತ್ತು. ಬಳಿಕ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಡಿದ್ದರಿಂದ ಮೊದಲಿಗೆ ನಾಲ್ವರು, ಆ ಬಳಿಕ 38 ಮಕ್ಕಳು ಅಸ್ವಸ್ಥರಾದರು. ಶನಿವಾರ ಬೆಳಿಗ್ಗೆ 5 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಚಿಕಿತ್ಸೆಗಾಗಿ ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಉಪ್ಪಿಟ್ಟು ನೀಡಲಾಗಿತ್ತು. ಮಧ್ಯಾಹ್ನದ ಊಟಕ್ಕೆ ಮುದ್ದೆ, ಅನ್ನ, ಸಾಂಬರು ನೀಡಲಾಗಿತ್ತು. ಆಹಾರದ ಮಾದರಿಯನ್ನು ದಾವಣಗೆರೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಶಾಸಕ ಎಂ.ಪಿ.ರೇಣುಕಾಚಾರ್ಯ ವಸತಿ ಶಾಲೆಗೆ ಭೇಟಿ ನೀಡಿ, ಮಕ್ಕಳು ಹಾಗೂ ಪೋಷಕರಿಗೆ ಧೈರ್ಯ ಹೇಳಿದರು.
ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಗುಣಮುಖರಾಗುತ್ತಿದ್ದಾರೆ ಎಂದು ತಾಲ್ಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಚಂದ್ರಪ್ಪ ತಿಳಿಸಿದ್ದಾರೆ.